ನವದೆಹಲಿ : ದೆಹಲಿ-ಕೋಲ್ಕತ್ತಾ ಮಾರ್ಗದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ವೇಳೆ ಕೆಲವು ಪ್ರತಿಭಟನಾಕಾರರು ರೈಲಿನ ಭೋಗಿಗೆ ಬೆಂಕಿ ಹಚ್ಚಿ ರೈಲನ್ನು ಧ್ವಂಸಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ರೈಲ್ವೆ ನಿಲ್ದಾಣದ ಫ್ಲಾಟ್ಫಾರ್ಮ್ನಾದ್ಯಂತ ಆಕ್ರೋಶಗೊಂಡ ಪ್ರತಿಭಟನಾ ನಿರತರು ಕಲ್ಲು ತೂರಾಟ ನಡೆಸಿದ್ದು, ರೈಲಿನ ಕಿಟಕಿಗಳನ್ನು ಒಡೆದು ಹಾಕಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.
ರೈಲ್ವೇ ನೇಮಕಾತಿ ಪರೀಕ್ಷೆ ಆಯ್ಕೆ ಪ್ರಕ್ರಿಯೆಯನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಹಿಂಸಾಚಾರದ ಘಟನೆಯ ಬಳಿಕ, ಭಾರತೀಯ ರೈಲ್ವೇಯು ಎನ್ಟಿಪಿಸಿ ಮತ್ತು ಹಂತ 1 ಪರೀಕ್ಷೆಗಳನ್ನು ಸ್ಥಗಿತಗೊಳಿಸಿದೆ. ಬಿಹಾರದಲ್ಲಿ ಸೋಮವಾರ ರೈಲ್ವೆ ನೇಮಕಾತಿ ಮಂಡಳಿಯು ನಡೆಸಿದ ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳ ಸ್ಪರ್ಧಾತ್ಮಕ ಪರೀಕ್ಷೆ, 2021ರಲ್ಲಿ ಫಲಿತಾಂಶಗಳು ತಪ್ಪಾಗಿ ಬಂದಿವೆ ಎಂದು ಆರೋಪಿಸಿ ಸೋಮವಾರ ಬಿಹಾರದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು.