ಭಯೋತ್ಪಾದಕರಿಂದ ಗುಂಡಿನ ದಾಳಿ !

ಶನಿವಾರ, 18 ಜೂನ್ 2022 (12:40 IST)
ಕಾಬೂಲ್ : ಅಫ್ಘಾಸ್ತಾನದ ರಾಜಧಾನಿಯಲ್ಲಿರುವ ಕಾರ್ತೆ ಪರ್ವಾನ್ ಗುರುದ್ವಾರದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
 
ಹಲವು ಸ್ಫೋಟಗಳಿಂದ ಸಾವು ನೋವುಗಳಾಗಿದ್ದು, ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿದೆ.

ಮೂಲಗಳ ವರದಿಯ ಪ್ರಕಾರ ಅಪರಿಚಿತ ಶಸ್ತ್ರಾಸ್ತ್ರಧಾರಿಯೊಬ್ಬ ಇಂದು ಮುಂಜಾನೆ ಗುರುದ್ವಾರಕ್ಕೆ ಪ್ರವೇಶಿಸಿದ್ದ ಎನ್ನಲಾಗಿದ್ದು, ಗುರುದ್ವಾರದಲ್ಲಿರುವವರೆಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಗುರುದ್ವಾರದ ದಾಳಿಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಇದರ ಹೊರತಾಗಿ ಸಾವು-ನೋವುಗಳ ಬಗ್ಗೆ ಇನ್ನೂ ದೃಢೀಕೃತ ಮಾಹಿತಿಯಿಲ್ಲ. ಭದ್ರತಾಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ಭಯೋತ್ಪಾದಕರ ವಿರುದ್ಧ ಹೋರಾಟ ಮುಂದುವರಿದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.

ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಗುರುದ್ವಾರ ಕಾರ್ತೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ