ಅಜ್ಮೀರ್ : ಅಪಾಯಕಾರಿ ಮೊಮೊ ಸೂಸೈಡ್ ಗೇಮ್ ನಿಂದಾಗಿ ಇದೀಗ ಭಾರತದಲ್ಲಿ ಹದಿನಾರು ವರ್ಷದ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.
ಈ ಅಪಾಯಕಾರಿ ಗೇಮ್ ನಿಂದಾಗಿ ವಿದೇಶದಲ್ಲಿ ಹಲವರು ಬಲಿಯಾಗಿದ್ದರು, ಆದರೆ ಭಾರತದಲ್ಲಿ ಇದೇ ಮೊದಲ ಬಾರಿಗೆ ರಾಜಸ್ತಾನದ ಅಜ್ಮೀರ್ ನಲ್ಲಿ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ಈಕೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯ ಸಹೋದರ ಆಕೆ ಮೊಮೊ ಗೇಮ್ ಆಡುತ್ತಿದ್ದಳು ಎಂದು ತಿಳಿಸಿದ್ದಾನೆ.
ಆದರೆ ಆಕೆ ಮೊಮೊ ಗೇಮ್ ನಿಂದಾಗಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ? ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.ರಾಜಸ್ತಾನ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು ಒಂದು ವೇಳೆ ಆಕೆ ಮೊಮೊ ಗೇಮ್ ನಿಂದಾಗಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಸಾಬೀತಾದರೆ ಮೊಮೊ ಚಾಲೆಂಜ್ ಗೆ ಭಾರತದ ಮೊದಲ ಬಲಿ ಇದಾಗಲಿದೆ. ಆದರೆ ಸಂಪೂರ್ಣ ಮಾಹಿತಿ ತಿಳಿಯಬೇಕಾದರೆ ತನಿಖೆ ಪೂರ್ಣಗೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ