ನವದೆಹಲಿ : ಡಿಜಿಟಲ್ ರೂಪಾಯಿ ಕಡೆಗೆ ದೇಶ ತರಾತುರಿಯಲ್ಲಿ ಹೆಜ್ಜೆ ಹಾಕುತ್ತಿದೆ. ಇದರ ಭಾಗವಾಗಿ ಡಿಸೆಂಬರ್ 1 ರಿಂದ ರಿಟೈಲ್ ಡಿಜಿಟಲ್ ರೂಪಾಯಿಯನ್ನು ಪೈಲಟ್ ಪ್ರಾಜೆಕ್ಟ್ ರೂಪದಲ್ಲಿ ಆರ್ಬಿಐ ಚಲಾವಣೆಗೆ ತರುತ್ತಿದೆ.
ಮೊದಲಿಗೆ ಬೆಂಗಳೂರು, ಮುಂಬೈ, ದೆಹಲಿ, ಭುವನೇಶ್ವರದಲ್ಲಿ ಈ ಪ್ರಯೋಗ ನಡೆಯಲಿದೆ. ಪ್ರಯೋಗದ ಭಾಗವಾಗಿ ಆಯ್ದ ಪ್ರಾಂತ್ಯಗಳಲ್ಲಿ ಬಳಕೆದಾರರು ಮತ್ತು ವ್ಯಾಪಾರಿಗಳ ನಡುವೆ ಡಿಜಿಟಲ್ ರೂಪಾಯಿ ಮೂಲಕ ವ್ಯವಹಾರ ನಡೆಯಲಿದೆ.
ಸದ್ಯ ನೋಟು ಮತ್ತು ನಾಣ್ಯಗಳ ಮೌಲ್ಯದಲ್ಲೇ ಡಿಜಿಟಲ್ ರೂಪಾಯಿಯ ವ್ಯವಹಾರಗಳು ನಡೆಯಲಿವೆ.