ನದಿಗೆ ಕಾರು ಬಿದ್ದು ಐವರು ಸಾವು

ಭಾನುವಾರ, 15 ಮೇ 2022 (14:40 IST)
ಪಾಟ್ನಾ: ಮದುವೆ ಸಮಾರಂಭಕ್ಕೆ ಹೋಗಿ ಬರುತ್ತಿದ್ದ ಕಾರು ನದಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದ ನವೀನ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. 
 
ಮೃತರೆಲ್ಲರೂ ಜಾರ್ಖಂಡ್‌ನ ಪಲಮು ನಿವಾಸಿಗಳು. ಅವರು ಟೋಲ್‌ ಪಂಚಾಯತ್‌ನ ಬಾಗಿ ಗ್ರಾಮದಲ್ಲಿ ಮದುವೆ ಸಮಾರಂಭ ಮುಗಿಸಿ ಪಲಮು ಜಿಲ್ಲೆಯಲ್ಲಿರುವ ಛತ್ರಾಪುರ್‌ಗೆ ಕಾರಿನಲ್ಲಿ ಬರುತ್ತಿದ್ದಾಗ ಈ ಅನಾಹುತ ಸಂಭವಿಸಿದೆ. 
 
ಕಾರು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏಳು ಜನರನ್ನು ಹೊತ್ತೊಯ್ಯುತ್ತಿದ್ದ ಎಂಎಚ್ 02 ಬಿಪಿ - 365 ನೋಂದಣಿ ಸಂಖ್ಯೆಯ ಕಾರು ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ