ಪ್ರವಾಹ ಸ್ಥಿತಿ: ಬಿಹಾರದ 2.50 ಲಕ್ಷ ಜನ ಸಂಕಷ್ಟದಲ್ಲಿ!

ಭಾನುವಾರ, 31 ಜುಲೈ 2016 (17:43 IST)
ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ 2.6 ಲಕ್ಷ ಜನರು ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
 
ಬಿಹಾರದ 12 ಜಿಲ್ಲೆಗಳಲ್ಲಿ ಸುಮಾರು ಅರ್ಧ ಮಿಲಿಯನ್‌‌ಗಿಂತ ಹೆಚ್ಚು ಜನರನ್ನು ಬೇರೆ ಪ್ರದೇಶಗಳಿಗೆ ಸ್ಥಳಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
 
ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಹಾರ ಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಭೇಟಿ ನೀಡಿ, ಸಂತ್ರಸ್ತರ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು.
 
ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸ್ಥಿತಿ ಮತ್ತಷ್ಟು ಬಿಗಡಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ರಕ್ಷಣಾ ಕಾರ್ಯಾಚರಣೆ ಹಾಗೂ ಪುನರ್ವಸತಿ ಕಲ್ಪಿಸಿಕೊಡುವ ಕಾರ್ಯ ಭರದಿಂದ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ಥರ ರಕ್ಷಣಾ ಕಾರ್ಯಾಚರಣೆಗಾಗಿ ಸರಕಾರ ಎನ್‌ಡಿಆರ್‌ಎಫ್‌ನ ಸುಮಾರು 587 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ