ಲಾಲು ಯಾದವ್‌ಗೆ ಮೂರುವರೆ ವರ್ಷ ಜೈಲು ಶಿಕ್ಷೆ, 5 ಲಕ್ಷ ದಂಡ

ಶನಿವಾರ, 6 ಜನವರಿ 2018 (18:32 IST)
ಬಹುಕೋಟಿ ಮೇವು ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌ಗೆ, ಸಿಬಿಐ ನಿಶೇಷ ಕೋರ್ಟ್ ಮೂರುವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದಲ್ಲದೇ 5 ಲಕ್ಷ ರೂ.ದಂಡ ವಿಧಿಸಿದೆ.
ಹಗರಣದಲ್ಲಿ ಭಾಗಿಯಾಗಿದ್ದ ಏಳು ಆರೋಪಿಗಳಿಗೆ ಕೂಡಾ ಮೂರವರೆ ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
 
ಕಳೆದ ಡಿಸೆಂಬರ್ ತಿಂಗಳಿನಲ್ಲಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ಲಾಲು ಸೇರಿದಂತೆ ಎಂಟು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರನ್ನು ಖುಲಾಸೆಗೊಳಿಸಿತ್ತು. 
 
1990-96ರ ಅವಧಿಯಲ್ಲಿ ಮೇವು ಖರೀದಿಯಲ್ಲಿ ಅಂದಾಜು 900 ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ಆರೋಪಿಸಿ ಆರೋಪಿಗಳ ವಿರುದ್ಧ 6 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದೀಗ ನೀಡಿದ ತೀರ್ಪು ಎರಡನೇ ಪ್ರಕರಣವಾಗಿದೆ.
 
ಪಶುಗಳಿಗೆ ಮೇವು ಮತ್ತು ಔಷಧಿ ಪೂರೈಸುವುದಾಗಿ ಆರೋಪಿಗಳು ಸರಕಾರಿ ಖಜಾನೆಯಿಂದ  ಬಹುಕೋಟಿ ರೂಪಾಯಿಗಳನ್ನು ಕಾನೂನುಬಾಹಿರವಾಗಿ ತಿಂದು ತೇಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ