ಬಲವಂತದ ಮತಾಂತರ ಭದ್ರತೆಯ ಮೇಲೆ ಪರಿಣಾಮ ಬೀರಬಹುದು : ಸುಪ್ರೀಂ
ನ್ಯಾಯಾಧೀಶರಾದ ಎಂ.ಆರ್ ಶಾ ಮತ್ತು ಹಿಮಾ ಕೊಹ್ಲಿ ಅವರ ದ್ವಿಸದಸ್ಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಿತ್ತು.
ಈ ವೇಳೆ ಬೆದರಿಕೆ ಹಾಕುವ ಮೂಲಕ ಅಥವಾ ಹಣ ಹಾಗೂ ಉಡುಗೊರೆಯ ಆಮಿಷವೊಡ್ಡಿ ಜನರನ್ನು ಮತಾಂತರಗೊಳಿಸುವುದರಿಂದ ರಾಷ್ಟ್ರದ ಭದ್ರತೆಗೆ ತೊಂದರೆ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಬಲವಂತದ ಮತಾಂತರಗಳನ್ನು ತಡೆಯಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.