ಬೆಂಗಳೂರು : ಪ್ರಸಕ್ತ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಮಸೂದೆ ಮಂಡನೆಗೆ ತೀರ್ಮಾನಿಸಿರುವ ರಾಜ್ಯ ಬಿಜೆಪಿ ಸರ್ಕಾರ, ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.
ಈಗಾಗಲೇ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021ರ ಮಸೂದೆಯನ್ನು ಸಿದ್ಧಪಡಿಸಿದೆ. ಸೋಮವಾರದ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ಪಡೆದು, ಬುಧವಾರ ವಿಧಾನಸಭೆಯಲ್ಲಿ ಮಸೂದೆ ಮಂಡಿಸಲು ಬೊಮ್ಮಾಯಿ ಸರ್ಕಾರ ಯೋಚಿಸಿದೆ.
ಒತ್ತಾಯ, ಆಮಿಷವೊಡ್ಡಿ ನಡೆಸಲಾಗುವ ಮತಾಂತರಗಳನ್ನು ನಿಷೇಧಿಸುವ ಅಂಶ ಪ್ರಸ್ತಾವಿತ ಮಸೂದೆಯಲ್ಲಿದೆ. ಆದರೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಸಹ ಮತಾಂತರ ವಿಧೇಯಕಕ್ಕೆ ನಮ್ಮ ವಿರೋಧ ಇದೆ ಎಂದಿದ್ದಾರೆ. ಕಾರಣ ನೀಡಿ ಎಂದು ಸರ್ಕಾರವನ್ನು ಕೇಳಿದ್ದಾರೆ. ಪ್ರಸ್ತಾವಿತ ಮಸೂದೆಯಲ್ಲಿ ಈ ಕೆಳಕಂಡ ಅಂಶಗಳಿವೆ.