ಪ್ರಾಣಿ ಪರೀಕ್ಷೆಗೆಂದು ಕರೆಸಿ ಬಲವಂತದ ಮದುವೆ!

ಬುಧವಾರ, 15 ಜೂನ್ 2022 (12:30 IST)
ಪಾಟ್ನಾ : ಪ್ರಾಣಿ ಪರೀಕ್ಷಿಸಲು ಕರೆಸಿದ್ದ ಪಶುವೈದ್ಯನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಬಿಹಾರದ ಬೇಗುಸರಾಯ್ನಲ್ಲಿ ನಡೆದಿದೆ.

ಸಂತ್ರಸ್ತನ ತಂದೆ ಈ ಕುರಿತು ಮಾತನಾಡಿದ್ದು, ನನ್ನ ಮಗನನ್ನು 12 ಗಂಟೆ ರಾತ್ರಿಗೆ ಪ್ರಾಣಿಯೊಂದಕ್ಕೆ ಆರೋಗ್ಯ ಸರಿಯಿಲ್ಲ ಎಂದು ಕರೆಸಿಕೊಂಡಿದ್ದರು. ಈ ವೇಳೆ ಮೂವರು ಬಂದು ನನ್ನ ಮಗನನ್ನು ಅಪಹರಿಸಿಕೊಂಡು ಹೋಗಿದ್ದಾರೆ.

ವಿಷಯ ತಿಳಿದು ನಮಗೆ ಗಾಬರಿಯಾಯಿತು. ಅದಕ್ಕೆ ನಾನು ಪೊಲೀಸರಿಗೆ ದೂರು ಕೊಟ್ಟಿದ್ದೇವೆ ಎಂದು ಹೇಳಿದರು.

ಬೇಗುಸರಾಯ್ ಎಸ್ಪಿ ಯೋಗೇಂದ್ರ ಕುಮಾರ್ ಈ ಕುರಿತು ಮಾತನಾಡಿದ್ದು, ಸಂತ್ರಸ್ತನ ತಂದೆ ಅವರೇ ದೂರನ್ನು ಬರೆದು ಪೊಲೀಸ್ ಠಾಣೆಗೆ ಕೊಟ್ಟಿದ್ದಾರೆ.

ಈ ಬಗ್ಗೆ ತನಿಖೆ ನಡೆಸುವಂತೆ ನಾವು ಎಸ್ಎಚ್ಒ ಮತ್ತು ಇತರ ಅಧಿಕಾರಿಗಳನ್ನು ಕೇಳಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ