ಭಾರತಕ್ಕೆ ಭೇಟಿ ನೀಡಿದ ಪಾಕ್ ವಿದೇಶಾಂಗ ಸಚಿವ

ಶನಿವಾರ, 6 ಮೇ 2023 (13:28 IST)
ಪಣಜಿ : ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ಗುರುವಾರ ಗೋವಾಕ್ಕೆ ಆಗಮಿಸಿದ್ದಾರೆ.
 
ಕಳೆದ 12 ವರ್ಷಗಳಿಂದ ಭಾರತಕ್ಕೆ ಪಾಕಿಸ್ತಾನದಿಂದ ಯಾವುದೇ ವಿದೇಶಾಂಗ ಸಚಿವರು ಭೇಟಿ ನೀಡಿರಲಿಲ್ಲ. ಇದೀಗ ಬುಲಾವಲ್ ಭುಟ್ಟೋ ಅವರು 12 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನದ ಮೊದಲ ಹಿರಿಯ ನಾಯಕ ಎನಿಸಿಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಗಡಿಯಾಚೆಗೆ ಭಯೋತ್ಪಾದಕರ ಕಾರ್ಯಾಚರಣೆ ಸೇರಿದಂತೆ ಹಲವಾರು ವಿಷಯಗಳಿಂದಾಗಿ ಉಭಯ ದೇಶಗಳ ನಡುವೆ ಸಂಘರ್ಷಗಳು ಮುಂದುವರಿದ ಒತ್ತಡದ ನಡುವೆಯೇ ಭುಟ್ಟೋ ಭಾರತಕ್ಕೆ ಭೇಟಿ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

ಗೋವಾದ ವಿಮಾನ ನಿಲ್ದಾಣಕ್ಕೆ ಬಿಲಾವಲ್ ಭುಟ್ಟೋ ಆಗಮಿಸಿದಾಗ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪಾಕಿಸ್ತಾನ-ಅಫ್ಘಾನಿಸ್ತಾನ-ಇರಾನ್ ವಿಭಾಗದ ಜಂಟಿ ಕಾರ್ಯದರ್ಶಿ ಜೆಪಿ ಸಿಂಗ್ ಸ್ವಾಗತಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ