ಮಾಜಿ ಸಿಎಂ, ಕೈ ನಾಯಕ ಉಮ್ಮನ್ ಚಾಂಡಿ ನಿಧನ

ಮಂಗಳವಾರ, 18 ಜುಲೈ 2023 (09:18 IST)
ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನ ವಿಧಿವಶರಾಗಿದ್ದಾರೆ.
 
79 ವರ್ಷದ ಉಮ್ಮನ್ ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 4.25ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

10 ಬಾರಿ ಶಾಸಕರಾಗಿದ್ದ ಉಮ್ಮನ್ ಚಾಂಡಿಯವರು ಜನಪರ ಆಡಳಿತದಿಂದ ಜನಮನ್ನಣೆ ಗಳಿಸಿದ್ದರು. 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು. 

ಸದ್ಯ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸುತ್ತಿದ್ದು, ಇತ್ತ ಅಗಲಿದ ಹಿರಿಯ ನಾಯಕನ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ