ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಇನ್ನಿಲ್ಲ

ಮಂಗಳವಾರ, 29 ಜನವರಿ 2019 (10:04 IST)
ನವದೆಹಲಿ : ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಇಂದು ನಿಧನರಾಗಿದ್ದಾರೆ


ಜಾರ್ಜ್ ಫರ್ನಾಡೀಸ್ ಅವರಿಗೆ  88 ವರ್ಷ ವಯಸ್ಸಾಗಿದ್ದು , ದೀರ್ಘಕಾಲದಿಂದ  ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಿಗ್ಗೆ ಮನೆಯಲ್ಲೇ ವಿಧಿವಶರಾಗಿದ್ದಾರೆ.


ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರದ ಅವಧಿಯಲ್ಲಿ  ಇವರು  ರಕ್ಷಣಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಜಾರ್ಜ್ ಫರ್ನಾಂಡೀಸ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ