ಮಾಜಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತೆ ಗಂಭೀರ

ಶನಿವಾರ, 24 ಆಗಸ್ಟ್ 2019 (11:52 IST)
ನವದೆಹಲಿ : ಅನಾರೋಗ್ಯದಿಂದ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎಂಬ ಮಾಹಿತಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆ. 9ರಂದು ಅರುಣ್ ಜೇಟ್ಲಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅರುಣ್ ಜೇಟ್ಲಿ ಅನಾರೋಗ್ಯದ ಕುರಿತು ಮಾಹಿತಿ ಸಿಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಅರುಣ್​ ಜೇಟ್ಲಿ ಲೈಫ್ ಸಪೋರ್ಟ್​ ಮೂಲಕ ಉಸಿರಾಟ ನಡೆಸುತ್ತಿರುವುದಾಗಿ ಮಂಗಳವಾರ ವೈದ್ಯರು ತಿಳಿಸಿದ್ದರು. ಆದರೆ, ನಿನ್ನೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ