ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾಧ್ಯಮದ ಮುಂದೆ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ನಾನು ಪ್ರಧಾನಿ ಮೋದಿಯವರ ನಾಯಕತ್ವದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದೇನೆ. ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಶ್ರೀಲಂಕಾದೊಂದಿಗಿನ ವ್ಯವಹಾರದಲ್ಲಿ ಕಾರ್ಯನಿರ್ವಹಿಸಿದ್ದೇನೆ.
ಪ್ರಧಾನಿ ಮೋದಿ ಅವರು ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಇಂದು ಅಭಿವೃದ್ಧಿ ತುಂಬಾ ಅಗತ್ಯವಿದೆ, ಆ ಬೆಳವಣಿಗೆ ಅಮೃತಸರಕ್ಕೂ ತಲುಪಬೇಕು. ಹಾಗಾಗಿ, ನಾನು ರಾಜಕೀಯ ಪ್ರವೇಶಿಸುತ್ತಿದ್ದೇನೆ ಎಂದರು. ನನ್ನನ್ನು ಪ್ರೋತ್ಸಾಹಿಸಿದ ಪಕ್ಷದ ಅಧ್ಯಕ್ಷರು, ಪ್ರಧಾನ ಮಂತ್ರಿಗಳು, ಗೃಹ ಸಚಿವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.