ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ಆರೋಗ್ಯ ಸ್ಥಿತಿಯಲ್ಲಿ ಏರುಪೇರು
ಭಾನುವಾರ, 12 ಆಗಸ್ಟ್ 2018 (15:17 IST)
ಕೋಲ್ಕತ್ತಾ :ಹಿರಿಯ ಕಮ್ಯೂನಿಸ್ಟ್ ಮುಖಂಡ ಮತ್ತು ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.
89 ವರ್ಷಗಳ ಸೋಮನಾಥ್ ಚಟರ್ಜಿ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಹಾಗು ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ಕೋಲ್ಕತಾದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಾಲುಗುತ್ತಿದ್ದು, ಇದೀಗ ಕೃತಕ ಉಸಿರಾಟದ ವ್ಯವಸ್ಥೆಯನ್ನೂ ಕೂಡ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.
ಹತ್ತು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಸೋಮನಾಥ ಚಟರ್ಜಿ 13ನೇ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಎಡರಂಗದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದ ಸೋಮನಾಥ ಚಟರ್ಜಿ ಅವರನ್ನು 2008ರಲ್ಲಿ ಸಿಪಿಎಂನಿಂದ ಉಚ್ಚಾಟಿಸಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ