ಮಾಜಿ ಸಚಿವ ಪಿ. ಚಿದಂಬರಂ ಬಂಧನದ ಹಿನ್ನಲೆ; ಕೇಂದ್ರದ ವಿರುದ್ಧ ಕಿಡಿಕಾರಿದ ಕರ್ನಾಟಕ ಕಾಂಗ್ರೆಸ್

ಗುರುವಾರ, 22 ಆಗಸ್ಟ್ 2019 (08:59 IST)
ನವದೆಹಲಿ : ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ಆಕ್ರೋಶ ವ್ಯಕ್ಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸಿಬಿಐ ಮತ್ತು ಇಡಿ ಬಿಜೆಪಿಯ ಮುಂಚೂಣಿ ಘಟಕಗಳಾಗಿ ಬದಲಾಗಿದ್ದು ರಾಜಕೀಯವಾಗಿ ಮಣಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ ಪಿ.ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಬಿಜೆಪಿ ಸರ್ಕಾರವು ಅತಿರೇಕದಿಂದ ವರ್ತಿಸುತ್ತಿದ್ದು ಅಧಿಕಾರದ ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಕಿಡಿಕಾರಿದೆ.


ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ನಿನ್ನೆ ಸಿಬಿಐ ಅಧಿಕಾರಿಗಳು ಬಂಧಿಸಿರುವ ಹಿನ್ನಲೆ ಸಿಬಿಐ ಕಚೇರಿಯಲ್ಲಿ ರಾತ್ರಿ ಕಳೆದ ಪಿ ಚಿದಂಬರಂ ಅವರನ್ನು ಸಿಬಿಐ ಟೀಂ ರಾತ್ರಿಯಿಡಿ ವಿಚಾರಣೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹಾಗೇ ಸಿಬಿಐ ಅಧಿಕಾರಿಗಳು ಇಂದು ಅವರನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ