ಮಾಜಿ ಸಚಿವ ಸುಭಾಷ್ ಸಿಂಗ್ ನಿಧನ

ಮಂಗಳವಾರ, 16 ಆಗಸ್ಟ್ 2022 (09:53 IST)
ಪಾಟ್ನಾ : ಬಿಹಾರದ ಮಾಜಿ ಸಚಿವ ಸುಭಾಷ್ ಸಿಂಗ್(59) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಈ ಹಿಂದೆ ಸುಭಾಷ್ ಸಿಂಗ್ ಅವರಿಗೆ ಕಿಡ್ನಿ ಕಸಿ ಮಾಡಲಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್)ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.  

ಆಗಸ್ಟ್ 16ರ ಮಂಗಳವಾರ ಬೆಳಗ್ಗೆ 11:30ಕ್ಕೆ ನಿತೀಶ್-ತೇಜಸ್ವಿ ಸರ್ಕಾರದ ಸಂಪುಟ ವಿಸ್ತರಣೆ ನಡೆಯುವ ಮುನ್ನವೇ ಸುಭಾಷ್ ಸಿಂಗ್ ಕೊನೆಯುಸಿರೆಳೆದಿರುವ ಸುದ್ದಿ ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ