ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ!

ಶನಿವಾರ, 24 ಆಗಸ್ಟ್ 2019 (13:12 IST)
ನವದೆಹಲಿ : ಅನಾರೋಗ್ಯ  ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ (66) ಇಂದು ಕೊನೆಯುಸಿರೆಳೆದಿದ್ದಾರೆ.
ಅರುಣ್ ಜೇಟ್ಲಿ ಅವರು ಹಲವು ದಿನಗಳಿಂದ ಅನಾರೋಗ್ಯ  ಸಮಸ್ಯೆಯಿಂದ ಬಳಲುತ್ತಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ  ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ.


2014ರ ಮೋದಿ ಸರ್ಕಾರದಲ್ಲಿ ಅರುಣ್ ಜೇಟ್ಲಿ ಅತ್ಯಂತ ಪ್ರಮುಖ ನಾಯಕರಾಗಿದ್ದು, ವಿತ್ತ ಮತ್ತು ರಕ್ಷಣಾ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಗಲಿದ ಹಿರಿಯ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ