ಕೇಂದ್ರ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಟ್ವೀಟರ್ ಖಾತೆ ಲಾಕ್ ಮಾಡಿದ್ದೇಕೆ ಗೊತ್ತಾ?

ಸೋಮವಾರ, 27 ಏಪ್ರಿಲ್ 2020 (09:04 IST)
Normal 0 false false false EN-US X-NONE X-NONE

ನವದೆಹಲಿ : ನಿಯಮ ಉಲ್ಲಂಘಿಸಿದ ಹಿನ್ನಲೆಯಲ್ಲಿ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಅವರ  ಟ್ವೀಟರ್ ಖಾತೆಯನ್ನು ಲಾಕ್ ಮಾಡಲಾಗಿದೆ.
 


 

ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ, ಟ್ವಿಟರ್  ಭಾರತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಟ್ವೀಟ್ ವೊಂದನ್ನು ಮಾಡಿದ್ದರು. ನಿಯಮ ಉಲ್ಲಂಘನೆ ಆಗಿರುವ ಕಾರಣದಿಂದ ಈ ಟ್ವಿಟ್ ನ್ನು ತೆಗೆದುಹಾಕುವಂತೆ ಟ್ವಿಟರ್ ಕಂಪೆನಿ  ನೋಟಿಸ್ ನೀಡಿತ್ತು.

 

ಆದರೆ ಅನಂತ್ ಕುಮಾರ್ ಹೆಗಡೆ ಈ ಬಗ್ಗೆ ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ   ಟ್ವೀಟರ್ ವಿರುದ್ಧ ಕಿಡಿಕಾರಿದ್ದಾರೆ. ಈ ಹಿನ್ನಲೆಯಲ್ಲಿ ನಿಯಮ ಉಲ್ಲಂಘಿಸಿದ ಕಾರಣ ಅನಂತ್ ಕುಮಾರ್ ಹೆಗಡೆ ಅವರ ಟ್ವೀಟರ್ ಖಾತೆಯನ್ನು ಲಾಕ್ ಮಾಡಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ