ಉತ್ತರಪ್ರದೇಶ: ಮಾಜಿ ಸಿಎಂ ಅಖಿಲೇಶ್ ಯಾದವ್ ಅರೆಸ್ಟ್

ಗುರುವಾರ, 17 ಆಗಸ್ಟ್ 2017 (20:37 IST)
ಸಮಾಜವಾದಿ ಪಕ್ಷದ ಮಾಜಿ ಶಾಸಕ ಪ್ರದೀಪ್ ಯಾದವ್ ಅವರನ್ನು ಭೇಟಿಯಾಗಲು ತೆರಳುತ್ತಿದ್ದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. 
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯೊಂದಿಗೆ ತೆರಳಲು ಸಮಾಜವಾದಿ ನಾಯಕರಿಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ಉಂಟಾದ ಘರ್ಷಣೆಯಲ್ಲಿ ಪೊಲೀಸರು ಕೆಲ ಸಮಾಜವಾದಿ ಪಕ್ಷದ ನಾಯಕರನ್ನು ಬಂಧಿಸಿದ್ದರು. ಈ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ ಪ್ರದೀಪ್ ಯಾದವ್‌ ಮೇಲೆ ಹಲ್ಲೆ ನಡೆಸಲಾಗಿತ್ತು.
 
ಪಕ್ಷದ ಕಾರ್ಯಕರ್ತರ ಹಿಂಸಾಚಾರದಿಂದಾಗಿ ನಿಯೋಜಿತ ಪೋಲಿಸರು ಸಮಾಜವಾದಿ ಪಕ್ಷದ ಮುಖಂಡರ ವಿರುದ್ಧ ಕೇಸ್ ದಾಖಲಿಸಿದ್ದರು. 
 
ವರದಿಗಳ ಪ್ರಕಾರ, ಶಾಸಕ ರಾಜಪಾಲ್ ಕಶ್ಯಪ್,ಮಾಜಿ ಶಾಸಕ ಪ್ರದೀಪ್ ಯಾದವ್ ಮತ್ತು ಇತರ ಸಮಾಜವಾದಿ ಪಕ್ಷದ ನಾಯಕರನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  
 
ಪೊಲೀಸರ ಪಕ್ಷಪಾತ ಧೋರಣೆ ವಿರುದ್ಧ ಪ್ರತಿಭಟಿಸುತ್ತಿರುವವರನ್ನು ಬಂಧಿಸಿ ದೌರ್ಜನ್ಯ ಎಸಗಲಾಗಿದೆ ಎಂದು ಸಮಾಜವಾದಿ ಪಕ್ಷದ ನಾಯಕರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ