ಇಂದಿನಿಂದ ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ₹ 39 ಏರಿಕೆ, ಹೋಟೆಲ್‌ ವರ್ತಕರು ಕಂಗಾಲು

Sampriya

ಭಾನುವಾರ, 1 ಸೆಪ್ಟಂಬರ್ 2024 (10:20 IST)
Photo Courtesy X
ನವದೆಹಲಿ: ಬೆಲೆಯೇರಿಕೆಯಿಂದ ತತ್ತರಿಸಿರುವ ಹೋಟೆಲ್‌ ವರ್ತಕರಿಗೆ ಮತ್ತಷ್ಟು ಇಂದಿನಿಂದ ಮತ್ತಷ್ಟು ಬರೆ ಬೀಳಲಿದೆ.  ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು ₹ 39ನಷ್ಟು ಹೆಚ್ಚಿಸಿವೆ.

ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆಗಳು ಯಥಾಸ್ಥಿತಿ ಕಾಯ್ದುಕೊಂಡಿವೆ. ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ ₹ 39 ಗಳಷ್ಟು ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ ₹30., ಜೂನ್‌ನಲ್ಲಿ ₹69.50 ಮತ್ತು ಮೇನಲ್ಲಿ ₹19 ಹೆಚ್ಚಳ ಮಾಡಲಾಗಿತ್ತು.

ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ.

ಈಗ ಸೆಪ್ಟೆಂಬರ್ 1ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1691.50 ರೂ.ಗೆ ಲಭ್ಯವಾಗಲಿದೆ. ಐಒಸಿಎಲ್‌ ವೆಬ್‌ಸೈಟ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಹೆಚ್ಚಳವು ಸೆಪ್ಟೆಂಬರ್ 1 ರಿಂದ ಜಾರಿಗೆ ಬಂದಿದೆ.

ಮುಂಬೈನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹ 1644, ಕೋಲ್ಕತ್ತಾದಲ್ಲಿ ₹ 1802.50, ಚೆನ್ನೈನಲ್ಲಿ ₹ 1855ಕ್ಕೆ ಏರಿಕೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ