ಶೌಚಾಲಯಕ್ಕೆ ತೆರಳುತ್ತಿದ್ದ ಯುವತಿಯ ಮೇಲೆ ಕ್ವಾರಂಟೈನ್ ನಲ್ಲಿದ್ದ ವಲಸೆ ಕಾರ್ಮಿಕರಿಂದ ಗ್ಯಾಂಗ್ ರೇಪ್

ಸೋಮವಾರ, 25 ಮೇ 2020 (09:12 IST)
Normal 0 false false false EN-US X-NONE X-NONE

ಪಾಟ್ನಾ : ಶೌಚಾಲಯಕ್ಕೆ ತೆರಳುತ್ತಿದ್ದ 18 ವರ್ಷದ ಯುವತಿಯ ಮೇಲೆ ಕ್ವಾರಂಟೈನ್ ನಲ್ಲಿದ್ದ ಇಬ್ಬರು ವಲಸೆ ಕಾರ್ಮಿಕರು ಸೇರಿ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರದ ರೋಹ್ತಾಸ್ ನಲ್ಲಿ ನಡೆದಿದೆ.

 

 

ಸಂತ್ರಸ್ತೆ ತಮ್ಮ ಮನೆಯಲ್ಲಿ ಶೌಚಾಲಯವಿಲ್ಲದ ಕಾರಣ ತೋಟಕ್ಕೆ ಹೋಗಿದ್ದಾಳೆ. ಅಲ್ಲಿ ಕ್ವಾರಂಟೈನ್ ನಲ್ಲಿದ್ದ ಇಬ್ಬರು ವಲಸೆ ಕಾರ್ಮಿಕರು ಆಕೆಯನ್ನು ಬಲವಂತವಾಗಿ ಎಳೆದುತಂದು ತಮ್ಮ ಊರಿನ ಮತ್ತೆ ನಾಲ್ವರನ್ನು ಫೋನ್ ಮಾಡಿ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

 

ಈ ಬಗ್ಗೆ ಸಂತ್ರಸ್ತೆ ತನ್ನ ಕುಟುಂಬದವರಿಗೆ ತಿಳಿಸಿದ ಕಾರಣ ಕುಟುಂಬದವರು ಕ್ವಾರಂಟೈನ್ ಕೇಂದ್ರಕ್ಕೆ ಹೋಗಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ಮಾಡಿದ್ದು, ಪ್ರಕರಣ ದಾಖಲಿಸಿದ ಪೊಲೀಸರು ಕ್ವಾರಂಟೈನ್ ನಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ