ತಾಯಿಯ ಎದುರೇ ಬಾಲಕಿ ಮೇಲೆ ಗ್ಯಾಂಗ್ ರೇಪ್!?

ಗುರುವಾರ, 13 ಅಕ್ಟೋಬರ್ 2022 (10:42 IST)
ರಾಂಚಿ : ಅಪ್ರಾಪ್ತ ಬಾಲಕಿಯ ತಾಯಿಯ ಎದುರೇ ಆಕೆಯನ್ನು ಐದು ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.

ದಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಹಾಗೂ ಆಕೆಯ ತಾಯಿ ದಿಯೋಘರ್ನಲ್ಲಿ ನಡೆದ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ಮರಳಿ ಮನೆಗೆ ಬರುತ್ತಿದ್ದಾಗ ಅವರಿದ್ದಲ್ಲಿಗೆ 2 ಬೈಕ್ನಲ್ಲಿ ಐವರು ಬಂದಿದ್ದಾರೆ. ಅಷ್ಟೇ ಅಲ್ಲದೇ ತಾಯಿ ಹಾಗೂ ಬಾಲಕಿಯು ಹೋಗುತ್ತಿದ್ದ ದಾರಿಯನ್ನು ತಪ್ಪಿಸಿದ್ದಾರೆ.

ನಂತರ ಮಧುಪುರ ಪ್ರದೇಶದಲ್ಲಿ ಬಾಲಕಿಯನ್ನು ಬಲವಂತವಾಗಿ ಪಕ್ಕಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಐವರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ತಾಯಿ ಇದನ್ನು ತಡೆಯಲು ಹೋದಾಗ ಆಕೆಯನ್ನು ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ