ಗಂಡನ ಎದುರೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ !

ಮಂಗಳವಾರ, 15 ನವೆಂಬರ್ 2022 (09:12 IST)
ಜೈಪುರ : ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯ ಮೇಲೆ ಆಕೆಯ ಪತಿಯ ಎದುರೇ ನಾಲ್ವರು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ನಾಲ್ವರು ದರೋಡೆ ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದ ಆರೋಪಿಗಳು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಸಂತ್ರಸ್ತ ದಂಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ಮಹಿಳೆಯ ಪತಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಪಿಂಡ್ವಾರಾ) ಜೇತು ಸಿಂಗ್ ಹೇಳಿದ್ದಾರೆ. ಬುಧವಾರ ರಾತ್ರಿ ದಂಪತಿ ಮಲಗಿದ್ದರು. ಈ ವೇಳೆ ನಾಲ್ವರು ಮನೆಗೆ ನುಗ್ಗಿ ಒತ್ತೆಯಾಳಾಗಿ ಇರಿಸಿದ್ದರು. 

ಮನೆಯ ವ್ಯಕ್ತಿ ಬಳಿ ಇದ್ದ 1,400 ರೂ. ಹಣವನ್ನು ಕಸಿದುಕೊಂಡಿದ್ದಾರೆ. ಕೆಲವು ಬೆಳ್ಳಿ ಆಭರಣಗಳನ್ನು ಹೊರತುಪಡಿಸಿ ದಂಪತಿ ಬಳಿ ಹೆಚ್ಚೇನೂ ಇರಲಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ