3 ವರ್ಷದ ಮಗುವಿನ ಮೇಲೆ ಗ್ಯಾಂಗ್ ರೇಪ್ !

ಶನಿವಾರ, 4 ಫೆಬ್ರವರಿ 2023 (11:28 IST)
ನವದೆಹಲಿ : 3 ವರ್ಷದ ಮಗುವಿನ ಮೇಲೆ ಕೀಚಕರು ಗ್ಯಾಂಗ್ ರೇಪ್ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಫತೇಪುರ್ ಬೆರಿಯಲ್ಲಿ ನಡೆದಿದೆ.

ಮನೆಯಲ್ಲಿ ಮಗು ಕಾಣದಿದ್ದಾಗ ಪೋಷಕರು ಅಕ್ಕಪಕ್ಕದ ಮನೆಯವರಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಮಗು ಇಬ್ಬರು ಯುವಕರೊಂದಿಗೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಪೋಷಕರು ಸ್ಥಳಕ್ಕೆ ತೆರಳಿ ನೋಡಿದಾಗ ಮಗು ಅಳುತ್ತಾ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಕೂಡಲೇ ಮಗುವನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಠಾಣೆಗೆ ದೂರು ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ