ರಾಷ್ಟ್ರಪ್ರಶಸ್ತಿ ಪಡೆದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಕೋಚಿಂಗ್ ಕ್ಲಾಸ್ ಗೆ ತೆರಳುತ್ತಿದ್ದಾಗ ಯುವತಿ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಈ ಯುವತಿ ತನ್ನ ಶಾಲಾ ದಿನಗಳಲ್ಲಿ ರಾಷ್ಟ್ರಪತಿಗಳಿಂದಲೇ ಪ್ರಶಸ್ತಿ ಪಡೆದಿದ್ದ ಪ್ರತಿಭಾವಂತೆ.
ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದಾಗ ದಾರಿ ಮಧ್ಯೆ ಯುವತಿಯನ್ನು ಅಪಹರಿಸಿದ ದುರುಳರು ಆಕೆಗೆ ಮತ್ತು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವನ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.