ಯುವತಿ ಮೇಲೆ ಗ್ಯಾಂಗ್ ರೇಪ್ !

ಶುಕ್ರವಾರ, 25 ಮಾರ್ಚ್ 2022 (13:17 IST)
ಚೆನ್ನೈ : ವೆಲ್ಲೂರಿನಲ್ಲಿ ಮಹಿಳಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಬೆಳಗ್ಗೆ ಅತ್ಯಾಚಾರ ನಡೆದಿದೆ. ಸಂತ್ರಸ್ತೆ ಆರಂಭದಲ್ಲಿ ಪೊಲೀಸರನ್ನು ಸಂಪರ್ಕಿಸಲಿಲ್ಲ. ಆದರೆ, ಕುಡಿದ ಅಮಲಿನಲ್ಲಿ ಜಗಳವಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದಾಗ ಅವರು ಅತ್ಯಾಚಾರ ನಡೆಸಿರುವುದು ಪೊಲೀಸರಿಗೆ ಗೊತ್ತಾಗಿದೆ.

ದರೋಡೆ ಮಾಡಲು ಹೋಗಿದ್ದ ಆ ಪುರುಷರು ಅದಕ್ಕೂ ಮೊದಲು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದರು ಎಂದು ಅವರು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. 

ವೆಲ್ಲೂರಿನ ಸತುವಾಚಾರಿಯಲ್ಲಿ ಎಟಿಎಂ ಹೊರಗೆ ಇಬ್ಬರು ಆರೋಪಿಗಳ ನಡುವೆ ಕುಡಿದ ಅಮಲಿನಲ್ಲಿ ಜಗಳವಾಗುತ್ತಿತ್ತು. ಆಗ ಪೊಲೀಸರು ಮಧ್ಯ ಪ್ರವೇಶಿಸಿದರು. ಅವರಿಬ್ಬರನ್ನು ಸತುವಾಚಾರಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ದರೋಡೆ ಮಾಡಿದ್ದಾರೆ ಎನ್ನಲಾದ 40,000 ರೂ.ಗಳನ್ನು ಹಂಚಿಕೆ ಮಾಡುವ ಬಗ್ಗೆ ಇಬ್ಬರೂ ಜಗಳ ಮಾಡಿದ್ದಾರೆ.

ಈ ಕುರಿತು ತನಿಖೆ ನಡೆಸಿದಾಗ ಅವರು ಅತ್ಯಾಚಾರ ನಡೆಸಿದ್ದಾಗಿ ಒಪ್ಪಿಕೊಂಡಿದ್ದನ್ನು ಕೇಳಿ ಪೊಲೀಸರು ಆಘಾತಗೊಂಡಿದ್ದಾರೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಸಿದಾಗ ಅವರಿಬ್ಬರೂ ಯುವತಿಯ ಮೇಲೆ ಅತ್ಯಾಚಾರವೆಸಗಿರುವುದಾಗಿ, ನಂತರ ಸಂತ್ರಸ್ತೆ ಹಾಗೂ ಅವರ ಪ್ರೇಮಿಯ ಬಳಿಯಿದ್ದ ಹಣವನ್ನು ದರೋಡೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಆರೋಪಿಗಳಲ್ಲಿ ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಾಪರಾಧಿಗಳ ವಿರುದ್ಧ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 21 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ