ನಂಬಿ ಬಂದ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್

ಸೋಮವಾರ, 4 ಡಿಸೆಂಬರ್ 2023 (13:21 IST)
ಬಾಲಕಿಯನ್ನು ಸಿನೆಮಾ ನೋಡಲು ಕರೆದುಕೊಂಡ ಹೋದ 25 ವರ್ಷ ವಯಸ್ಸಿನ ಆರೋಪಿಯೊಬ್ಬ ಸಿನೆಮಾ ಮುಕ್ತಾಯವಾದ ನಂತರ ಸೆಂಟ್ರಲ್ ದೆಹಲಿಯಲ್ಲಿರುವ ಏಕಾಂತ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ತನ್ನ ನಾಲ್ಕು ಮಂದಿ ಗೆಳೆಯರೊಂದಿಗೆ ಸೇರಿಕೊಂಡು ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
 
16 ವರ್ಷ ವಯಸ್ಸಿನ ಬಾಲಕಿಯ ಮೇಲೆ ಐವರು ಕಾಮುಕರು ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಬಾಲಕಿ ಮನೆಗೆ ಮರಳಿದ ನಂತರ ತಂದೆ ತಾಯಿಗೆ ಘಟನೆಯನ್ನು ವಿವರಿಸಿದಾಗ ಪೊಲೀಸ್ ಠಾಣೆಗೆ ದೂರ ನೀಡಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ