ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್!

ಗುರುವಾರ, 11 ಆಗಸ್ಟ್ 2022 (15:01 IST)
ಲಕ್ನೋ : 8ನೇ ತರಗತಿಯ ವಿದ್ಯಾರ್ಥಿನಿಯನ್ನು 5 ಜನರು ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಆಕೆಯ ಸಹೋದರನನ್ನು ಮನ ಬಂದಂತೆ ಥಳಿಸಿದ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.

ಸಂತ್ರಸ್ತೆ ಮತ್ತು ಆಕೆಯ ಸಹೋದರ ದೇವಸ್ಥಾನದಿಂದ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಐವರು ಆರೋಪಿಗಳನ್ನು ಅವರನ್ನು ಅಪಹರಿಸಿದ್ದಾರೆ. ಇದಾದ ನಂತರ ಸಂತ್ರಸ್ತೆಯ ಸಹೋದರನನ್ನು ಕೊಠಡಿಯಲ್ಲಿ ಬಂಧಿಸಿ ಅವನನ್ನು ಥಳಿಸಿದ್ದಾರೆ. ಇದಾದ ಬಳಿಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಅತ್ಯಾಚಾರದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಹೋದರನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಘಟನೆ ಬಗ್ಗೆ ತಿಳಿದ ಸಂತ್ರಸ್ತೆಯ ಕುಟುಂಬಸ್ಥರು ಮೋದಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ