ನವದೆಹಲಿ: ಅನಿಲ ಸೋರಿಕೆಯಿಂದಾಗಿ ದೆಹಲಿಯ ರಾಣಿ ಝಾನ್ಸಿ ಸರ್ವೋದಯ ಕನ್ಯಾ ವಿದ್ಯಾಲಯದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೆಹಲಿಯ ತುಘ್ಲಕ್ ಬಾದ್ ನ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ‘ವಿದ್ಯಾರ್ಥಿಗಳು ಕಣ್ಣುರಿ ಮತ್ತು ಗಂಟಲು ಕಿರಿ ಕಿರಿಯಾಗುತ್ತಿದೆಯೆಂದು ದೂರಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಶಾಲೆಯ ಉಪ ಪ್ರಾಂಶುಪಾಲರು ಹೇಳಿದ್ದಾರೆ.
ಗ್ಯಾಸ್ ಡಿಪೋದಲ್ಲಿ ಅನಿಲ ಸೋರಿಕೆಯಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಬೆಳಗ್ಗೆ 7.30 ರ ಸುಮಾರಿಗೆ ದುರಂತ ಸಂಭವಿಸಿತ್ತು. ತಕ್ಷಣ ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹೆಚ್ಚಿನ ಅಪಾಯವಾಗದಂತೆ ನೋಡಿಕೊಂಡರು.
ದುರಂತಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಅಸ್ವಸ್ಥರಾದ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಗತಿ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ