ತಮಿಳುನಾಡಿನಲ್ಲಿ ಜರ್ಮನ್ ಮಹಿಳೆಯ ಮೇಲೆ ಗ್ಯಾಂಗ್‌ರೇಪ್

ಸೋಮವಾರ, 3 ಏಪ್ರಿಲ್ 2017 (14:24 IST)
ತಮಿಳುನಾಡು ಪ್ರವಾಸಕ್ಕೆ ಬಂದಿದ್ದ ಜರ್ಮನ್ ಮೂಲದ ಮಹಿಳೆಯ ಮೇಲೆ ದುಷ್ಕರ್ಮಿಗಳು ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ವರದಿಯಾಗಿದೆ.
 
ಚೆನ್ನೈ ನಗರದಿಂದ 60 ಕಿ.ಮೀ ದೂರದಲ್ಲಿರುವ ಪ್ರವಾಸಿ ತಾಣವಾದ ಮಹಾಬಲೀಪುರಂ ಗೆ ಆಗಮಿಸಿದ್ದ ಮಹಿಳೆ, ಬೀಚ್‌ನಲ್ಲಿ ಏಕಾಂಗಿಯಾಗಿ ತಿರುಗುತ್ತಿದ್ದಾಗ, ಅಲ್ಲಿಗೆ ಬಂದ ಕೆಲ ದುಷ್ಕರ್ಮಿಗಳು ಆಕೆಯನ್ನು ಬೆದರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಗ್ಯಾಂಗ್‌ರೇಪ್ ಎಸಗಿದ್ದಾರೆ.
 
ಅತ್ಯಾಚಾರದ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಮಹಿಳೆಯನ್ನು ಹತ್ಯೆ ಮಾಡುವುದಾಗಿ ಆರೋಪಿಗಳು ಬೆದರಿಕೆಯೊಡ್ಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅತ್ಯಾಚಾರಕ್ಕೊಳಗಾದ ಮಹಿಳೆ ಮಹಾಬಲೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಮಹಿಳೆಯ ದೂರು ಆಧರಿಸಿ ಪೊಲೀಸರು ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ