ಮೈಸೂರು: ಅಪ್ರಾಪ್ತ ಬಾಲಕಿ ಅಪಹರಣ; ಅತ್ಯಾಚಾರ

ಬುಧವಾರ, 8 ಜುಲೈ 2015 (09:07 IST)
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆಯಲ್ಲಿ ಬೆಳಕಿಗೆ ಬಂದಿದೆ.
 
ಜೂನ್ 30 ರಂದು ಬಾಲಕಿಯನ್ನು ಅಪಹರಿಸಿಕೊಂಡು ಆರೋಪಿ ನಾಪತ್ತೆಯಾಗಿದ್ದ. ಬಾಲಕಿ ನಾಪತ್ತೆಯಾದ ಕುರಿತು ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 
 
ಆರೋಪಿಯನ್ನು 24 ವರ್ಷದ ಅನಿಲ್ ಎಂದು ಗುರುತಿಸಲಾಗಿದ್ದು  ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ.
 
ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ.
 
ಹೆಚ್. ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
ತಾಲ್ಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಪದೇ ಪದೇ ದಾಖಲಾಗುತ್ತಿದ್ದು ಈ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ