ಉದ್ಯಮಿಯ ಬ್ಲ್ಯಾಕ್ ಮೇಲ್ ನಿಂದ ಬೇಸತ್ತ ಹುಡುಗಿ ಮಾಡಿದ್ದೇನು?

ಗುರುವಾರ, 29 ಅಕ್ಟೋಬರ್ 2020 (09:31 IST)
ಲಕ್ನೋ : ಸ್ಥಳೀಯ ಉದ್ಯಮಿ ಕಿರುಕುಳ ಹಾಗೂ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ 16 ವರ್ಷದ ಹುಡುಗಿಯೊಬ್ಬಳು ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆರೋಪಿ ಹುಡುಗಿಯ ಮನೆಯಲ್ಲಿ ಬಾಡಿದಾರನಾಗಿದ್ದು, ಇದೀಗ ಬೇರೆ ಮನೆಗೆ ತೆರಳಿದ್ದಾನೆ. ಈತ ಹುಡುಗಿಗೆ ಫೊಟೊಗಳನ್ನು ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಗಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ಆರೋಪಿ ಉದ್ಯಮಿ ಸಿಕ್ಕಿಹಾಕಿಕೊಂಡಿದ್ದಾನೆ. ಆದಕಾರಣ ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ