ನವದೆಹಲಿ : ಶನಿವಾರ ತಡರಾತ್ರಿಯಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಯನ್ನು ದೆಹಲಿಯ ದ್ವಾರಕಾ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.
ಶನಿವಾರ ತಡರಾತ್ರಿ, ದ್ವಾರಕಾ ಸೆಕ್ಟರ್ 23 ರಿಂದ ಪೊಲೀಸರಿಗೆ ಪಿಸಿಆರ್ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿಯೊಬ್ಬರು ಹುಡುಗಿ ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಳು.
ನಂತರ ಕರೆಯನ್ನು ಮಹಿಳಾ ಪೊಲೀಸ್ ಅಧಿಕಾರಿ ಬೀನಾಗೆ ವರ್ಗಾಯಿಸಲಾಯಿತು. ಅವರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದಾರೆ. ಲಿಫ್ಟ್ ನೀಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಆರೋಪಿಯು ಹಸಿರು ಬಣ್ಣದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಹೊಂದಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕರೆ ಸ್ವೀಕರಿಸಿದ ಸಬ್ ಇನ್ಸ್ಪೆಕ್ಟರ್ ಬಾಲು ರಾಮ್, ಕರೆ ಮಾಡಿದ ವ್ಯಕ್ತಿ ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ ತಕ್ಷಣವೇ ನಮ್ಮ ತಂಡ ಸ್ಥಳಕ್ಕೆ ಧಾವಿಸಿದೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಪೊಲೀಸ್ ತಂಡವು ದೂರುದಾರರು ಲಿಫ್ಟ್ ತೆಗೆದುಕೊಂಡ ಸ್ಥಳದ ಬಳಿ ಅಳವಡಿಸಲಾದ ವಿವಿಧ ಕ್ಯಾಮೆರಾಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು.
ಇತರ ರಸ್ತೆಗಳಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳನ್ನು ಸಹ ಪರಿಶೀಲಿಸಿದ್ದಾರೆ. ಈ ವೇಳೆ ಕೆಲವೇ ಗಂಟೆಗಳಲ್ಲಿ ಪೊಲೀಸರು ಹಸಿರು ಬಣ್ಣದ ಸ್ಕೂಟಿಯನ್ನು ಗುರುತಿಸಿದ ಕ್ಲಿಪ್ ಅನ್ನು ಕಂಡುಹಿಡಿದರು. ಅದರಲ್ಲಿ ದೂರುದಾರರು ಆರೋಪಿಯ ಹಿಂದೆಯೇ ನಿಂತಿದ್ದರು.
ಪೊಲೀಸರು ವಿವಿಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಕೆಲವೇ ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿದ್ದಾರೆ.