ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಓರ್ವನ ಬಂಧನ
ಮಧ್ಯಪ್ರದೇಶದ ದಿಂಡೋರಿಯಲ್ಲಿ ಚಲಿಸುತ್ತಿರುವ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಓರ್ವನನ್ನು ಬಂಧಿಸಲಾಗಿದೆ. 16 ವರ್ಷದ ಬಾಲಕಿ ಮೇಲೆ ಕಾರಿನಲ್ಲಿ ಅತ್ಯಾಚಾರ ಎಸಗಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಗರದ ಬಜಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಪೊಲೀಸರ ಪ್ರಕಾರ, ಅಪ್ರಾಪ್ತ ಬಾಲಕಿ ತನ್ನ ಸಹೋದರಿಯೊಂದಿಗೆ ಬಿರ್ಸಾ ಮುಂಡಾ ಅವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಘಟನೆ ನಡೆದಿದೆ.ಒಬ್ಬನನ್ನ ಬಂಧಿಸಿದ್ದು ಉಳಿದವರಿಗೆ ಪೊಲೀಸರು ಬಲೆ ಬೀಸಿದ್ದಾರೆ.