ಏರ್‌ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಕೊಡಿ- ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

ಶುಕ್ರವಾರ, 1 ಮಾರ್ಚ್ 2019 (06:51 IST)
ನವದೆಹಲಿ : ಏರ್‌ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣವಾದ  ಮಾಹಿತಿ ಕೊಡಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.


ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್‌ಸ್ಟ್ರೈಕ್ ಬಗ್ಗೆ ನಾವು ಮಾಧ್ಯಮಗಳನ್ನು ನೋಡಿ ಮಾಹಿತಿ ಪಡೆದಿದ್ದೇವೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ. ಎಷ್ಟು ಬಾಂಬ್‍ಗಳನ್ನು ಉಗ್ರರ ಮೇಲೆ ಹಾಕಲಾಗಿದೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ವಿದೇಶಿ ಮಾಧ್ಯಮಗಳಲ್ಲಿ ಏರ್‌ಸ್ಟ್ರೈಕ್  ನಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿ ಬರುತ್ತಿದೆ. ಇನ್ನೊಂದೆಡೆ ಕೆಲವು ಮಾಧ್ಯಮಗಳಲ್ಲಿ ಒಬ್ಬ ಮೃತ ಪಟ್ಟಿದ್ದಾನೆ ಎಂದು ಉಲ್ಲೇಖಿಸಲಾಗುತ್ತಿದೆ. ಇದರಲ್ಲಿ ಯಾವುದು ಸತ್ಯವೆಂದು ಕೇಂದ್ರ ಸರ್ಕಾರವೇ ತಿಳಿಸಬೇಕು. ನಮಗೆ ಈಗ ಏರ್‌ಸ್ಟ್ರೈಕ್ ಬಗ್ಗೆ ಮಾಹಿತಿ ಕೊಡಿ ಎಂದು ಮಮತಾ ಬ್ಯಾನರ್ಜಿ ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ