ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ

ಸೋಮವಾರ, 18 ಮಾರ್ಚ್ 2019 (06:31 IST)
ಗೋವಾ : ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಭಾನುವಾರ ಗೋವಾದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಇವರಿಗೆ 63 ವರ್ಷ ವಯಸ್ಸಾಗಿದ್ದು, ಕಳೆದ ಒಂದು ವರ್ಷದಿಂದ  ಮೆದೋಜೀರಕ ಗೃಂಥಿ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಗೋವಾದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


ಯುವಕರಾಗಿದ್ದ ವೇಳೆಯೇ ಅವರು ಆರ್ ಆರ್ ಎಸ್ ನಲ್ಲಿ ಗುರುತಿಸಿಕೊಂಡಿದ್ದ ಸಿಎಂ ಮನೋಹರ್ ಪರಿಕ್ಕರ್ ಅವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರದಲ್ಲಿ ಒಬ್ಬರಾಗಿ ಬೆಳೆದರು. ಇವರ ನಿಧನಕ್ಕೆ ಇಡೀ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ