ಗೋದ್ರಾ ಹತ್ಯಾಕಾಂಡ: 11 ಅಪರಾಧಿಗಳ ಗಲ್ಲುಶಿಕ್ಷೆಗೆ ಹೈಕೋರ್ಟ್ ತಡೆ
ಅಹಮದಾಬಾದ್: 2002ರ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 11 ದೋಷಿಗಳಿಗೆ ನೀಡಿದ್ದ ಗಲ್ಲುಶಿಕ್ಷೆಗೆ ಗುಜರಾತ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಪರಾಧಿಗಳಿಗೆ ನೀಡಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ಆದೇಶ ನೀಡಿದೆ.
ಪ್ರಕರಣದಲ್ಲಿ 63 ಮಂದಿಯನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಇಂದು ಸಹ ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.