ಗುಜರಾತ್ ಹೈಕೋರ್ಟ್ ಇತ್ತೀಚೆಗೆ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು. ಅವರ ಜಾಮೀನು ಅರ್ಜಿಯನ್ನು ಈಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದಲ್ಲಿ 11 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದರೆ, ಇತರೆ 20 ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ದೋಷಿಗಳು ರೈಲಿನ ಬೋಗಿಗಳ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದ ಪ್ರಕರಣ ಗಂಭೀರ ಅಪರಾಧವಾಗಿದೆ ಎಂದು ಗುಜರಾತ್ ಸರ್ಕಾರ ಕೋರ್ಟ್ ಗಮನಕ್ಕೆ ತಂದಿತ್ತು.
ನಂತರ ಗುಜರಾತ್ ಹೈಕೋರ್ಟ್ 31 ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಆದರೆ 11 ಮಂದಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು.
ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಪರಾಧಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 2018 ರಿಂದ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ ಹಂತದಲ್ಲಿದೆ.