ರೈತರಿಗೆ ಗುಡ್‌ನ್ಯೂಸ್‌: ಅಡಮಾನ ರಹಿತ ಕೃಷಿ ಸಾಲದ ಮಿತಿ ₹2 ಲಕ್ಷಕ್ಕೆ ಹೆಚ್ಚಿಸಿದ ಆರ್‌ಬಿಐ

Sampriya

ಶನಿವಾರ, 14 ಡಿಸೆಂಬರ್ 2024 (14:04 IST)
Photo Courtesy X


ಕೃಷಿಯಲ್ಲಿ ಹೆಚ್ಚುತ್ತಿರುವ ಮೂಲ ಬಂಡವಾಳ, ಬೀಜ ಹಗೂ ಗೊಬ್ಬರ ವೆಚ್ಚವನ್ನು ಗಮದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರನ್ನು ಒಳಗೊಂಡಂತೆ ಶೇ 86ರಷ್ಟು ರೈತರಿಗೆ ನೆರವಾಗಲಿದೆ ಎಂದು ಕೃಷಿ ಸಚಿವಾಲಯ ಹೇಳಿದೆ.

ಈ ಹೊಸ ಮಾರ್ಗಸೂಚಿಯನ್ನು ತ್ವರಿತವಾಗಿ ಅಳವಡಿಸುವುದು ಹಾಗು ಹೆಚ್ಚು ರೈತರನ್ನು ತಲುಪುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಈಗಾಗಲೇ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಇದರೊಂದಿಗೆ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್‌ ಬಳಕೆಯನ್ನೂ ಉತ್ತೇಜಿಸಲಾಗುತ್ತಿದೆ. ಈ ಯೋಜನೆ ಮೂಲಕ ಶೇ 4ರ ಬಡ್ಡಿದರದಲ್ಲಿ ₹3 ಲಕ್ಷವರೆಗೆ ಸಾಲ ಪಡೆಯಲು ರೈತರು ಅರ್ಹರಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ