ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ತೆರುವುಗೊಳಿಸಬೇಕು ಎನ್ನುವ ಸುಪ್ರೀಂಕೋರ್ಟ್ ಆದೇಶಕ್ಕೆ ಪಂಜಾಬ್ ಸರಕಾರ ಸೆಡ್ಡುಹೊಡೆದಿದೆ.
ಪಂಜಾಬ್ ವಿಧಾನಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬಾರ್‌ಗಳನ್ನು ಉಳಿಸುವಂತೆ ನಿರ್ಣಯ ಅಂಗೀಕಾರ ಮಾಡಿ ಸುಪ್ರೀಂಕೋರ್ಟ್ ಆದೇಶಕ್ಕೆ ಸೆಡ್ಡುಹೊಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬಾರ್‌ಗಳು, ಮದ್ಯದಂಗಡಿಗಳಿಂದಾಗಿ ಚಾಲಕರು ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವುದರಿಂದ ಅಪಘಾತ ಸಂಖ್ಯೆಗಳಲ್ಲಿ ಹೆಚ್ಚಳವಾಗುತ್ತಿದೆ ಎನ್ನುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.
ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ, ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಸದನದಲ್ಲಿ ನಿರ್ಣಯ ಮಂಡಿಸಿರುವುದು ವಿಪಕ್ಷಗಳಲ್ಲಿ ಆಕ್ರೋಶ ಮೂಡಿಸಿದೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.