ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಹಿಂದಿ ಭಾಷಾ ಕಲಿಕೆ ಕಡ್ಡಾಯವಲ್ಲ ಎಂದ ಕೇಂದ್ರ ಸರ್ಕಾರ

ಸೋಮವಾರ, 3 ಜೂನ್ 2019 (12:48 IST)
ನವದೆಹಲಿ : ರಾಷ್ಟ್ರೀಯ ಶಿಕ್ಷಣ ಕರಡು ನೀತಿಯನ್ನು ಪರಿಷ್ಕರಿಸಿದ ಕೇಂದ್ರ ಸರ್ಕಾರ ಇದೀಗ  ಹಿಂದಿ ಭಾಷಾ ಕಲಿಕೆ ಕಡ್ಡಾಯವಲ್ಲ ಎಂದು ಹೇಳಿದೆ.




ಈ ಮೊದಲು ಕೇಂದ್ರ ಸರ್ಕಾರ ಸ್ಥಳೀಯ ಭಾಷೆ ಜೊತೆಗೆ ಹಿಂದಿ ಕಲಿಕೆ ಕಡ್ಡಾಯ ಎಂದು  ತಿಳಿಸಿತ್ತು. ಇದರಿಂದ ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಬೀಳುವುದರಿಂದ ತಮಿಳುನಾಡು, ಕರ್ನಾಟಕ, ಕೇರಳದಲ್ಲಿ ರಾಜಕೀಯ ನಾಯಕರು ಹಿಂದಿ ಭಾಷೆ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.


ಈ ಹಿನ್ನಲೆಯಲ್ಲಿ ಇದೀಗ ರಾಷ್ಟ್ರೀಯ ಶಿಕ್ಷಣ ಕರಡು ನೀತಿ ಬದಲಾಯಿಸಿದ ಕೇಂದ್ರ ಸರ್ಕಾರ ಹಿಂದಿ ಭಾಷಾ ಕಲಿಕೆ ಕಡ್ಡಾಯವಲ್ಲ ಎಂದು ಹೇಳುವುದರ ಮೂಲಕ ನಾಯಕರ ಮನವಿಗೆ ಮನ್ನಣೆ ನೀಡಿದಂತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ