ಫಲಿತಾಂಶಕ್ಕೂ ಮೊದಲೇ ಸರ್ಕಾರ ರಚನೆ !

ಗುರುವಾರ, 10 ಮಾರ್ಚ್ 2022 (13:07 IST)
ಇಂಫಾಲ್ : ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಅತಂತ್ರ ವಿಧಾನಸಭೆ ಪರಿಸ್ಥಿತಿ ತಲೆದೋರುವ ಸ್ಪಷ್ಟ ಲಕ್ಷಣಗಳು ಕಾಣಿಸುತ್ತಿವೆ.
 
ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೂ ಸ್ಪಷ್ಟ ಬಹುಮತದಿಂದ ಹಿಂದಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರರನ್ನು ಒಟ್ಟುಗೂಡಿಸಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಕಾರ್ಯತಂತ್ರ ರೂಪಿಸಿದೆ.

ಮಣಿಪುರದಲ್ಲಿ ಸದ್ಯ ಬಿಜೆಪಿ 27, ಎನ್ಪಿಪಿ 12, ಕಾಂಗ್ರೆಸ್ 11, ಇತರರು 10 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ರಾಜ್ಯದಲ್ಲಿ ಒಟ್ಟು 60 ಸ್ಥಾನಗಳಿದ್ದು, ಬಹುಮತಕ್ಕೆ 31 ಸ್ಥಾನಗಳನ್ನು ಗೆಲ್ಲಬೇಕಿದೆ. ಆದರೆ ಫಲಿತಾಂಶವನ್ನು ಗಮನಿಸಿದರೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಸೃಷ್ಟಿಯಾಗಬಹುದು ಎಂದು ವಿಶ್ಲೇಷಿಸಲಾಗಿದೆ. ಫಲಿತಾಂಶಕ್ಕೂ ಮೊದಲು ಮಣಿಪುರದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ ಮುಂದಾಗಿದೆ.
.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ