ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ : ಮುರ್ಮು

ಗುರುವಾರ, 2 ಫೆಬ್ರವರಿ 2023 (12:14 IST)
ನವದೆಹಲಿ : ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಮೊದಲ ಬಾರಿಗೆ ಮಾತನಾಡಿದರು.

ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ಅವಧಿಯ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವುದರಿಂದ ಹಿಡಿದು ತ್ರಿವಳಿ ತಲಾಖ್ ರದ್ದುಗೊಳಿಸುವವರೆಗೆ,

ನನ್ನ ಸರ್ಕಾರವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ನಮ್ಮ ಸರ್ಕಾರ ಭಯೋತ್ಪಾದನೆಯನ್ನು ಹತ್ತಿಕ್ಕಿದೆ, ಎಲ್ಒಸಿ ಮತ್ತು ಎಲ್ಎಸಿಯಲ್ಲಿ ಸೂಕ್ತ ಪ್ರತಿಕ್ರಿಯೆಯನ್ನು ನೀಡಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ