ರಾಜಕೀಯ ಲಾಭಕ್ಕಾಗಿ ಮೋದಿ ಸರಕಾರ "ತಲಾಕ್"ಗೆ ಮಣೆ: ಗುಲಾಮ್ ನಬಿ ಆಜಾದ್
ಸೋಮವಾರ, 17 ಅಕ್ಟೋಬರ್ 2016 (16:29 IST)
ದೇಶದಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವಲ್ಲಿ ವಿಫಲವಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ತಲಾಕ್ನಂತಹ ವಿಷಯವನ್ನು ಎತ್ತುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
ತಲಾಕ್ ವಿವಾದ ಈಗಾಗಲೇ ಸುಪ್ರೀಂಕೋರ್ಟ್ನಲ್ಲಿರುವುದರಿಂದ ಹೆಚ್ಚಿನ ವಿವಾದ ಸೃಷ್ಟಿಸಲು ನಾವು ಬಯಸುವುದಿಲ್ಲ. ಸಂಕಷ್ಟಗಳನ್ನು ಎದುರಿಸುತ್ತಿರುವ ಜನತೆಯ ಗಮನವನ್ನು ಬೇರೆಡೆ ತಿರುಗಿಸಲು ಮೋದಿ ಸರಕಾರ ಪ್ರಯತ್ನಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಮೋದಿ ಸರಕಾರ 370ನೇ ಕಾಯ್ದೆಯಂತಹ ವಿಷಯಗಳ ಬಗ್ಗೆ ಚರ್ಚಿಸಬೇಕು. ಅದನ್ನು ಬಿಟ್ಟು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತಲಾಕ್ನಂತಹ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಆದರೆ, ಜಾತಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ