ಒಲಾ, ಉಬರ್ಗಳಿಗೆ ಸರ್ಕಾರ ವಾರ್ನಿಂಗ್?

ಬುಧವಾರ, 11 ಮೇ 2022 (11:41 IST)
ನವದೆಹಲಿ : ಕ್ಯಾಬ್ ಕಂಪನಿಗಳಾದ ಓಲಾ, ಉಬರ್ಗಳಿಗೆ ಬೇಡಿಕೆ ಹೆಚ್ಚಿದಂತೆ ದೂರುಗಳು ಬರಲು ಪ್ರಾರಂಭಿಸಿವೆ.

ಆದ್ದರಿಂದ ದೂರುಗಳನ್ನು ಪರಿಹರಿಸಿ, ಇಲ್ಲವೇ ದಂಡ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನಿಡಿರುವ ಕೇಂದ್ರ ಸರ್ಕಾರ, ನ್ಯಾಯಯುತ ಬೆಲೆ ನಿಗದಿ ಮಾಡಲು ಮುಂದಾಗಿದೆ. ಅದಕ್ಕಾಗಿ ಕ್ಯಾಬ್ ಕಂಪನಿಗಳಿಗೆ ಮಾರ್ಗಸೂಚಿ ನೀಡಲಾಗುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಈಗಾಗಲೇ ಕೇಂದ್ರ ಮತ್ತು ರಾಜ್ಯ ಸಾರಿಗೆ ಇಲಾಖೆಗಳ ಮಾರ್ಗ ಸೂಚಿಗಳು ಭಿನ್ನವಾಗಿರುತ್ತವೆ. ಮಾಹಿತಿಯ ಪ್ರಕಾರ, ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿಗದಿತ ಗಡುವುಗಳೊಂದಿಗೆ ಗ್ರಾಹಕರ ದೂರುಗಳ ಪರಿಹಾರಕ್ಕಾಗಿ ಮಾರ್ಗಸೂಚಿಗಳನ್ನು ನಿಗದಿಪಡಿಸುವ ಸಾಧ್ಯತೆಯಿದೆ.

ಗ್ರಾಹಕರ ದೂರುಗಳನ್ನು ಕಟ್ಟುನಿಟ್ಟಾಗಿ ಪರಿಹರಿಸಲು ನಾವು ಕ್ಯಾಬ್ ಕಂಪನಿಗಳನ್ನು ಕೇಳಿದ್ದೇವೆ. ಗ್ರಾಹಕರ ಕುಂದುಕೊರತೆಗಳ ಪರಿಹಾರಕ್ಕೆ ತಕ್ಷಣವೇ ಸಂಭಾವ್ಯ ಪರಿಹಾರಗಳೊಂದಿಗೆ ಬರಲು ನಾವು ಅವರಿಗೆ ಎಚ್ಚರಿಕೆ ನೀಡಿದ್ದೇವೆ ಇಲ್ಲದಿದ್ದರೆ ಸಕ್ಷಮ ಪ್ರಾಧಿಕಾರವು ಅವರ ವಿರುದ್ಧ ಶಿಕ್ಷಾರ್ಹ ಕ್ರಮವನ್ನು ತೆಗೆದುಕೊಳ್ಳುತ್ತದೆ.

ಮುಖ್ಯವಾಗಿ ಡೆಸ್ಟಿನೇಶನ್ ಜೊತೆ ರದ್ದತಿ ಶುಲ್ಕದ ಪ್ರಕಾರ ದರವು ಎಷ್ಟು ನ್ಯಾಯಯುತ ಮತ್ತು ಸಮಂಜಸವಾಗಿದೆ ಎಂಬುದನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ