ದೇಶದ ಪ್ರತಿಯೊಂದು ಗ್ರಾಮೀಣ ಭಾಗಗಳಿಗೆ ಬ್ರಾಡ್‌ಬ್ಯಾಂಡ್ ಸೌಲಭ್ಯ: ರವಿಶಂಕರ್ ಪ್ರಸಾದ್

ಸೋಮವಾರ, 21 ಜುಲೈ 2014 (15:23 IST)
ರಾಜ್ಯಸರಕಾರಗಳ ನೆರವಿನೊಂದಿಗೆ ದೇಶದ ಪ್ರತಿಯೊಂದು ಗ್ರಾಮಗಳಲ್ಲಿ ಬ್ರಾಡ್‌ಬ್ಯಾಂಡ್‌ ಸೌಲಭ್ಯವನ್ನು ಒದಗಿಸಲು ಕೇಂದ್ರ ಸರಕಾರ ಬದ್ದವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
 
ದೇಶದ ಗ್ರಾಮೀಣ ಭಾಗಗಳಲ್ಲಿ 1.34 ಲಕ್ಷ ಇಂಟರ್‌ನೆಟ್ ಕೇಂದ್ರಗಳನ್ನು ಸ್ಥಾಪಿಸಿ ಮಾಹಿತಿ ತಂತ್ರಜ್ಞಾನವನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
 
ದೇಶದ ಅನೇಕ ಗ್ರಾಮೀಣ ಭಾಗಗಳಲ್ಲಿ ಬ್ರಾಡ್‌ಬ್ಯಾಂಡ್ ಸೌಲಭ್ಯಗಳಿಲ್ಲ.ಆದ್ಯತೆಯ ಮೇರೆಗೆ ಬ್ರಾಡ್‌ಬ್ಯಾಂಡ್ ಸೇವೆ ವಿಸ್ತರಿಸಲಾಗುವುದು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 
 

ವೆಬ್ದುನಿಯಾವನ್ನು ಓದಿ