ಕೊರೋನಾ ಮೂರನೇ ಅಲೆ ತಡೆಯಲು ಸರ್ಕಾರದ ಸಿದ್ಧತೆ ಶುರು

ಶನಿವಾರ, 17 ಜುಲೈ 2021 (10:31 IST)
ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಮೂರನೇ ಅಲೆ ತಡೆಯಲು ಸಿದ್ಧತೆ ನಡೆಸಿದೆ.


ಆಕ್ಸಿಜನ್ ಘಟಕಗಳ ಹೆಚ್ಚಳ, ವೈದ್ಯರ ನೇಮಕಾತಿ, ಆಸ್ಪತ್ರೆಗಳಲ್ಲಿ ಬೆಡ್ ಸಂಖ್ಯೆ ಹೆಚ್ಚಳ ಸೇರಿದಂತೆ ಹಲವು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯನಿರತವಾಗಿದೆ.

ಮುಂದಿನ ತಿಂಗಳು ಕೊರೋನಾ ಮೂರನೇ ಅಲೆ ಅಪ್ಪಳಿಸಬಹುದು ಎಂದು ತಜ್ಞರು ಭವಿಷ್ಯ ನುಡಿದಿದ್ದರು. ಅದಕ್ಕೆ ತಕ್ಕಂತೇ ಈಗ ಮತ್ತೆ ಕೆಲವು ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದು ಎಚ್ಚರಿಕೆಯ ಕರೆಗಂಟೆಯಾಗಿದೆ. ಪ್ರಧಾನಿ ಮೋದಿ ಕೂಡಾ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಕೇಂದ್ರದಿಂದ ಬಿಡುಗಡೆ ಮಾಡಬಹುದಾದ ಪರಿಹಾರ ಹಣ ಬಿಡುಗಡೆ ಮಾಡಿ ರಾಜ್ಯಗಳಿಗೆ ಕೊರೋನಾ ವಿರುದ್ಧ ಹೋರಾಡಲು ನೆರವಾಗಲು ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ