ರಣ ಬಿಸಿಲಿಗೆ ನಲುಗಿದ ಸರ್ಕಾರ : ಇಂದು ಹೈವೋಲ್ಟೇಜ್ ಸಭೆ

ಮಂಗಳವಾರ, 20 ಜೂನ್ 2023 (12:22 IST)
ಲಕ್ನೋ : ರಣ ಬಿಸಿಲಿನ ತಾಪದಿಂದ ಬಳಲುತ್ತಿರುವ ಉತ್ತರ ಪ್ರದೇಶದಲ್ಲಿ ಮಂಗಳವಾರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ರಾಜ್ಯವು ಶಾಖದ ಅಲೆಗೆ ನಲುಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
 

ಹೌದು. ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಮಧ್ಯಪ್ರದೇಶ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಖದ ಅಲೆಗೆ ಸಾವು ನೋವುಗಳು ವರದಿಯಾಗಿವೆ.

 
UP ನಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ 54 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಠಾತ್ ಸಾವುಗಳು, ಜ್ವರ, ಉಸಿರಾಟದ ತೊಂದರೆ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳು ಭರ್ತಿಯಾಗುತ್ತಿವೆ. ಬಿಹಾರದಲ್ಲೂ 44 ಮಂದಿ ಸಾವನ್ನಪ್ಪಿದ್ದಾರೆ.  ಈಗಾಗಲೇ ಕೆಲವು ರಾಜ್ಯಗಳು ಬಿಸಿಲಿನ ತಾಪಮಾನದಿಂದ ಮಕ್ಕಳನ್ನು ರಕ್ಷಿಸಲು ಉದ್ದೇಶದಿಂದ ಬೇಸಿಗೆ ರಜೆ ವಿಸ್ತರಣೆ ಮಾಡಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ